Breaking News
Home / ಇತ್ತೀಚಿನ ಸುದ್ದಿಗಳು / ನಿರುದ್ಯೋಗಿಗಳಿಗೆ ಕಾರು ಭಾಗ್ಯ ನೀಡಿದ ಸಿಎಂ ಸಿದ್ದರಾಮಯ್ಯ, ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ನಿರುದ್ಯೋಗಿಗಳಿಗೆ ಕಾರು ಭಾಗ್ಯ ನೀಡಿದ ಸಿಎಂ ಸಿದ್ದರಾಮಯ್ಯ, ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

ಹೌದು ಸಿಎಂ ಸಿದ್ದರಾಮಯ್ಯನವರು ಹಲವು ಭಾಗ್ಯಗಳನ್ನು ನೀಡಿದ್ದಾರೆ ಅದರ ಜೊತೆಗೆ ಮತ್ತೊಂದು ಹೊಸ ಭಾಗ್ಯ ಸೇರ್ಪಡೆಯಾಗಿದೆ ಅದುವೇ ಕಾರು ಭಾಗ್ಯ. ಈ ಕಾರು ಭಾಗ್ಯದಲ್ಲಿ ಯಾರು ಯಾರು ಹೇಗೆ ಅರ್ಜಿ ಹಾಕಬಹುದು ಅನ್ನೋದು ಇಲ್ಲಿದೆ ನೋಡಿ.

ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 3500 ಮಂದಿಗೆ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಈ ಸಂಬಂಧ ವಿಶೇಷ ಯೋಜನೆ ರೂಪಿಸಿದೆ. ರಾಜ್ಯ ಸರ್ಕಾರ ಈ ಯೋಜನೆಗಾಗಿ 105 ಕೋಟಿ ರೂ. ಅನುದಾನವನ್ನೂ ಬಿಡುಗಡೆ ಮಾಡಿದೆ. ವಾಲ್ಮೀಕಿ, ಬೋವಿ, ದೇವರಾಜ ಅರಸು ಅಭಿವೃದ್ಧಿ ನಿಗಮಗಳ ಮೂಲಕವೂ ಯೋಜನೆ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ಬೆಂಗಳೂರಿನಲ್ಲಿ ಈಗಾಗಲೇ ಚಾಲನೆ ದೊರೆತಿದ್ದು ಆರಂಭಿಕವಾಗಿ 1000 ಅಭ್ಯರ್ಥಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ.

ಏನಿದು ಯೋಜನೆ?

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸುಮಾರು 3500 ಟ್ಯಾಕ್ಸಿ ಕಾರುಗಳ ವಿತರಣೆ.

ಆಯ್ಕೆಯಾದ ಫಲಾನುಭವಿಗಳಿಗೆ ಒಂದು ಟ್ಯಾಕ್ಸಿಗೆ 3 ಲಕ್ಷ ರೂ.ವರೆಗೆ ಸಬ್ಸಿಡಿ.

ಬ್ಯಾಂಕ್​ಗಳಿಂದ ಸಾಲ ದೊರೆಯುವಂತೆ ಮಾಡುವುದು, ಓಲಾ ಹಾಗೂ ಊಬರ್ ಕಂಪನಿಗಳ ಜತೆ ಟೈಅಪ್ ಮಾಡಿಕೊಂಡು ಬಿಜಿನೆಸ್ ಕೊಡಿಸುವುದು, ಗಳಿಸಿದ ಆದಾಯದಲ್ಲಿ ಬ್ಯಾಂಕ್​ಗಳಿಗೆ ಸಾಲ ಮರುಪಾವತಿಯಾಗುವಂತೆ ನೋಡಿಕೊಳ್ಳುವುದು.

ಈ ಯೋಜನೆಯ ಮಾನದಂಡಗಳೇನು?

ಅಭ್ಯರ್ಥಿ ಬಳಿ ಹಳದಿ ಬ್ಯಾಡ್ಜ್ ಇರಬೇಕು

ನಿರುದ್ಯೋಗಿಯಾಗಿರಬೇಕು

ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರಿ ಹೊಂದಿರಬಾರದು

ಬಿಪಿಎಲ್ ಕಾರ್ಡ್ ಹೊಂದಿರಬೇಕು

ವರ್ಷಕ್ಕೆ 12 ಸಾವಿರ ರೂ. ಮೀರಿರಬಾರದು.

ಆಯ್ಕೆ ಪಕ್ರಿಯೆ ಹೇಗೆ?

ಆಯಾ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಜಿಗಳನ್ನು ಪಡೆದು ಸ್ವ ವಿವರಗಳನ್ನು ಭರ್ತಿ ಮಾಡಿ ಕೊಡಬೇಕು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ.

ಯಾವ ಕಾರಿಗೆ ಸಬ್ಸಿಡಿ?
ಫಲಾನುಭವಿಯು 6 ರಿಂದ 8 ಲಕ್ಷ ರೂ. ವರೆಗಿನ ಹುಂಡೈ ಕಂಪನಿಯ ಎಸ್ಸೆಂಟ್ ಕಾರು, ಟೊಯೋಟಾ ಇಟಿಯೋಸ್, ಮಾರುತಿ ಸ್ವಿಫ್ಟ್ ಡಿಸೈರ್ ಅಥವಾ ಹೊಂಡಾ ಅಮೇಝಾನ್‌ ಕಾರುಗಳನ್ನು ಖರೀದಿಸಬೇಕಾಗುತ್ತದೆ.

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *