Breaking News
Home / ಆರೋಗ್ಯ / ಹಾಗಲಕಾಯಿ ಅಂದ್ರೆ ಯಾರಿಗೂ ಇಷ್ಟವಿಲ್ಲ ಆದರೆ ಇದರ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿದರೆ ಕಂಡಿತ ತಪ್ಪದೆ ಬಳಕೆ ಮಾಡುತ್ತೀರಾ..!

ಹಾಗಲಕಾಯಿ ಅಂದ್ರೆ ಯಾರಿಗೂ ಇಷ್ಟವಿಲ್ಲ ಆದರೆ ಇದರ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿದರೆ ಕಂಡಿತ ತಪ್ಪದೆ ಬಳಕೆ ಮಾಡುತ್ತೀರಾ..!

ಹೌದು ಹಾಗಲಕಾಯಿ ಮಾನವನ ಆರೋಗ್ಯಕ್ಕೆ ತುಂಬ ಉತ್ತಮವಾದ ತರಕಾರಿಯಾಗಿದೆ ಇದು ಹಲವು ರೋಗಗಳನ್ನು ತಡೆಗಟ್ಟುವ ಶಕ್ತಿಯನ್ನು ಹೊಂದಿದೆ. ಬನ್ನಿ ಈ ಹಾಗಲಕಾಯಿ ಯಾವೆಲ್ಲ ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತೆ ಅಂತ ನೋಡಣ.

ಮಲೇರಿಯಾ ನಿರೋಧಕ:
ಹಾಗಲಕಾಯಿಯು ಮಲೇರಿಯಾ ರೋಗವನ್ನು ತಡೆಗಟ್ಟುವಲ್ಲಿ ಹಾಗು ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ ಸಹಕಾರಿಯಾಗಿದೆಯೆಂದು ಏಷಿಯಾದಲ್ಲಿ ಸಾಂಪ್ರದಾಯಿಕವಾಗಿ ಪರಿಗಣಿಸಲಾಗುತ್ತದೆ. ಪನಾಮ ಹಾಗು ಕೊಲಂಬಿಯಾನಲ್ಲೂ ಸಹ ಈ ಉದ್ದೇಶಗಳಿಗಾಗಿ ಇದರ ಎಲೆಗಳಿಂದ ತಯಾರಿಸಲಾದ ಟೀಯನ್ನು ಬಳಸಲಾಗುತ್ತದೆ.

೧. ಹಾಗಲ ಲಿವರ್ ಶುದ್ಧೀಕರಿಸುವ ಒಂದು ತರಕಾರಿ. ಇದು ಯಕೃತ್ತನ್ನು ಶುದ್ಧಗೊಳಿಸಲು ಮತ್ತು ಜೀವಕೋಶಗಳ ಪುನರುತ್ಪಾದನೆಯಲ್ಲಿ ಸಹಕರಿಸುತ್ತದೆ.

೨.ಹಾಗಲರಸ ಮಧುಮೇಹ-2 ಅನ್ನು ಹೊಂದಿರುವ ರೋಗಿಗಳಿಗೆ ಒಂದು ಉತ್ತಮ ಔಷಧಿ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಿ, ಇನ್ಸುಲಿನ್ ಪ್ರತಿರೋಧವನ್ನು ಗುಣಪಡಿಸುತ್ತದೆ.

೩.ಹಾಗಲಕಾಯಿ ಜೀರ್ಣಕ್ರಿಯೆಗೆ ಉತ್ತಮ. ಇದು ಪಚನ ಮಟ್ಟವನ್ನು ಹೆಚ್ಚಿಸುವ ಆ್ಯಂಟಿ ಆಕ್ಸಿಡೆಂಟ್‌ಗಳಿಂದಲೂ ಕೂಡಿದೆ. ಇದಲ್ಲದೆ ಹಾಗಲ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಒಂದು ತರಕಾರಿ.

೪.ಕಹಿಯಾದ ತರಕಾರಿ ಮತ್ತು ಹಣ್ಣುಗಳು ಬಹುವಾಗಿ ಚರ್ಮಕ್ಕೆ ಪ್ರಯೋದನಕಾರಿ. ಹಾಗಲ ಊರಿಯೂತ ವಿರೋಧಿ ಗುಣಲಕ್ಷಣಗಳನ್ನು ಹೊಂದಿದ್ದು, ಚರ್ಮದಿಂದ ವಿಷಕಾರಿ ಜೀವಾಣುಗಳನ್ನು ತೊಲಗಿಸಲೂ ಸಹಕರಿಸುತ್ತದೆ.

೫.ನಮ್ಮ ದೇಹವನ್ನು ಶುದ್ಧಿಗೊಳಿಸುವ ಹಾಗಲಕಾಯಿ ಹೇರಳವಾಗಿ ಆ್ಯಂಟಿ ಆಕ್ಸಿಡೆಂಟ್‌ಗಳಿಂದ ಕೂಡಿದೆ. ಹಾಗಾಗಿ ಈ ತರಕಾರಿ ರೋಗಗಳ ವಿರುದ್ಧ ಹೋರಾಡಲು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕಾರಿಯಾಗಿದೆ.

೬.ಮೂತ್ರಕೋಶ ಮತ್ತು ಮೂತ್ರಪಿಂಡಗಳಿಗೆ ಔಷಧಿ. ಹಾಗಲಕಾಯಿ ಕಿಡ್ನಿಗಳನ್ನು ಶುದ್ಧಿಗೊಳಿಸುತ್ತದೆ ಮತ್ತು ಮೂತ್ರ ಕೋಶದಲ್ಲಿ ಸಂಗ್ರಹವಾಗುವ ಕಲ್ಲುಗಳನ್ನು ಹೋಗಲಾಡಿಸಲು ಔಷಧಿಯಾಗಿ ಕೆಲಸ ಮಾಡುತ್ತದೆ.

೭.ಉಸಿರಾಟದ ತೊಂದರೆಗಳಿಗೆ ಪ್ರಯೋಜನಕಾರಿ. ಹಾಗಲಕಾಯಿಯನ್ನು ನಿಯಮಿತವಾಗಿ ಬಳಸುವುದರಿಂದ ತೀವ್ರ ಉಸಿರಾಟದ ತೊಂದರೆಗಳಾದ ಅಸ್ತಮಾ ಅಥವಾ ಶ್ವಾಸನಾಳಗಳ ಒಳಪೊರೆಯ ಉರಿಯೂತಗಳನ್ನು ಹತೋಟಿಯಲ್ಲಿಡಬಹುದು.

೮.ಈ ತರಕಾರಿ ಹೇರಳವಾಗಿ ನಾರಿನಂಶ ಹೊಂದಿದ್ದು, ಮಲಬದ್ಧತೆಯನ್ನು ತಡೆಯುತ್ತದೆ.
ಈ ತರಕಾರಿಯಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಆ್ಯಂಟಿಆಕ್ಸಿಡೆಂಟ್‌ಗಳಿದ್ದು, ಕ್ಯಾನ್ಸರ್‌ಕಾರಕ ಜೀವಕೋಶಗಳು ದೇಹದಲ್ಲಿ ಹೆಚ್ಚಾಗುವುದನ್ನು ತಡೆಯುತ್ತದೆ.

೯.ರಕ್ತದಲ್ಲಿರುವ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವಲ್ಲಿ ಹಾಗಲ ಸಹಾಕಾರಿಯಾಗಿದ್ದು, ಇದು ಅಪಧಮನಿಗಳು ಮುಚ್ಚಿಹೋಗುವುದನ್ನು ತಡೆಯುತ್ತವೆ. ಇದರಿಂದ ಹೃದಯ ಆರೋಗ್ಯವಾಗಿರುತ್ತದೆ.

About admin

Check Also

ಹುಳುಕಡ್ಡಿ ಸಮಸ್ಯೆಗೆ ನೇರಳೆಯಲ್ಲಿ ಅಡಗಿದೆ ಓಷಧಿ ಗುಣಗಳು..!

ನಮಗೆ ಮುಖದಲ್ಲಿ ಅಥವಾ ಮೈ ಕೈ ಮೇಲೆ ಹುಳುಕಡ್ಡಿಯಂತಹ ಸಮಸ್ಯೆ ಬಂದರೆ ಅದು ನಮಗೆ ತುಂಬಾ ಹಿಂಸೆ ಅನ್ನಿಸುತ್ತದೆ ಅದು …

Leave a Reply

Your email address will not be published. Required fields are marked *