Breaking News
Home / ಇತ್ತೀಚಿನ ಸುದ್ದಿಗಳು / ಕಡು ಬಡತನದಲ್ಲಿ ಅರಳಿದ ಈ ಪ್ರತಿಭೆಗೆ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳುವ ಆಸೆ..!

ಕಡು ಬಡತನದಲ್ಲಿ ಅರಳಿದ ಈ ಪ್ರತಿಭೆಗೆ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳುವ ಆಸೆ..!

ಹೌದು ಬಡತನ ಎನ್ನುವುದು ಎಲ್ಲರನ್ನು ಒಂದಲ್ಲ ಒಂದು ರೀತಿಯಲ್ಲಿ ಕಾಡುತ್ತದೆ ಅದೇ ರೀತಿ ಈ ಹುಡುಗನ ಬದುಕಲ್ಲೂ ಬಡತನ ಕಾಡುತಿದ್ದೆ. ಕಾಯಕವೇ ಕೈಲಾಸ ಅಂತ ತನ್ನ ದಿನ ನಿತ್ಯ ಕೆಲಸ ಮಾಡಿಕೊಂಡು ಈ ಹುಡುಗ ಶಾಲೆಗೆ ಹೋಗುತ್ತಾನೆ.

ಅತೀ ಚಿಕ್ಕ ವಯಸ್ಸಿನಲ್ಲೇ ಒಂದು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ಕಾಯಕ ಮಾಡುತ್ತಿದ್ದಾನೆ. ಈ ಚಿಕ್ಕ ವಯಸ್ಸಿನಲ್ಲೇ ಈ ಹುಡುಗ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಟೀ ಮಾರಿಕೊಂಡು ತನ್ನ ಕುಟುಂಬಕ್ಕೆ ಆಸರೆಯಾಗಿದ್ದಾನೆ. ಈ ಹುಡುಗ ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ 8.30 ರ ತನಕ ಟೀ ಮಾರಿಕೊಂಡು ಬಂದು ನಂತರ ಶಾಲೆಗೆ ಹೋಗುತ್ತಾನೆ ಮತ್ತೆ ಸಂಜೆ ಶಾಲೆ ಮುಗಿಸಿಕೊಂಡು ಬಂದು ಮತ್ತೆ ಟೀ ಮಾರಲು ಹೋಗುತ್ತಾನೆ.

ಈ ಹುಡುಗ ಕೊಪ್ಪಳ ನಗರದ ಮುಚಿಗೇರ ಓಣಿಯ ಮಹಾಂತೇಶ ಬೈಲ್‌ಪತ್ತಾರ, ಟೀ ಮಾರುವ ಕಾಯಕದಲ್ಲಿ ನಿರತನಾಗಿದ್ದಾನೆ. ಬರುವ ಆದಾಯದಲ್ಲೆ ಮನೆಗೆ ಸ್ವಲ್ಪ ಹಣ ನೀಡುವ ಮೂಲಕ ವಿದ್ಯಾಭ್ಯಾಸದ ಖರ್ಚು-ವೆಚ್ಚಗಳನ್ನು ಸರಿದೂಗಿಸಿಕೊಂಡು ಹೋಗುತ್ತಿರುವುದು ವಿಶೇಷ. ಈ ಪೋರ ನಗರದ ಕೋಟೆ ಏರಿಯಾದ ಹತ್ತಿರವಿರುವ ಬ್ರಹ್ಮನವಾಡಿ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿ ಅಧ್ಯಯನ ಮಾಡುತ್ತಿದ್ದು, ಓದಿನೊಂದಿಗೆ ಕುಟುಂಬಕ್ಕೆ ಸಹಕಾರಿಯಾಗಿದ್ದಾನೆ.

ಟೀ ಮಾರುವ ಕಾಯಕ:
ಈ ಬಾಲಕನ ತಂದೆ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದರಿಂದ ತನ್ನ ತಾಯಿ ಭೀಮಮ್ಮ ಅವರೊಂದಿಗೆ ದುಡಿಮೆ ಮಾಡುತ್ತಲೇ ವಿದ್ಯಾಭ್ಯಾಸ ನಡೆಸುತ್ತಿದ್ದಾನೆ. ಇವರ ಮನೆಯಲ್ಲಿರುವ ಅಜ್ಜಿ ಬೆಳಗ್ಗೆ ಹಾಗೂ ಸಂಜೆ ಮಹಾಂತೇಶನಿಗೆ ಟೀ ತಯಾರಿಸಿ ಕೊಡುತ್ತಾರೆ.ಟೀ ಮಾರಿ ನಿತ್ಯ 300 ಸಂಪಾದಿಸುತ್ತಾನೆ. ಅದರಲ್ಲಿ ಟೀ ಮಾಡುವುದಕ್ಕೆ 100 ತೆಗೆದರೂ 200 ಆದಾಯ ಉಳಿಯುತ್ತಿದೆ.

ಬಡತನದಲ್ಲಿ ಅರಳಿದ ಪ್ರತಿಭೆ:
ತೀವ್ರ ಸಂಕಷ್ಟದಲ್ಲಿರುವ ಇವರ ಕುಟುಂಬಕ್ಕೆ ದುಡಿಮೆಯೆ ಆಸರೆ. ಮಹಾಂತೇಶನ ತಾಯಿ ಭೀಮವ್ವ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಮಕ್ಕಳೊಂದಿಗೆ ಕಷ್ಟದ ದಿನಗಳನ್ನು ಕಳೆಯುತ್ತಿದ್ದಾರೆ. ಅದರೊಂದಿಗೆ ಮಕ್ಕಳಿಗೂ ಸಣ್ಣ ಪುಟ್ಟ ಕೆಲಸಗಳನ್ನು ನೀಡಿ ಜೀವನ ಸರಿದೂಗಿಸುವುದರೊಂದಿಗೆ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ.

ಓದಿನಲ್ಲೂ ಮುಂದು:
ಓದಿನಲ್ಲಿಯೂ ಮುಂದಿರುವ ಮಹಾಂತೇಶ, ಶಾಲಾ ಚಟುವಟಿಕೆಯಲ್ಲೂ ಸೈ ಎನಿಸಿಕೊಂಡಿದ್ದಾನೆ. ದಿನನಿತ್ಯ ಕೆಲಸದೊಂದಿಗೆ ಶಾಲೆಯಲ್ಲಿ ಗುರುಗಳು ಹೇಳಿದ ಪಾಠವನ್ನು ಮನೆಯಲ್ಲಿ ರಾತ್ರಿ ಅಭ್ಯಾಸ ಮಾಡುತ್ತಾನೆ. ಆ ಮೂಲಕ ಓದಿನಲ್ಲಿಯೂ ಮುಂದಿದ್ದು, ಜಾಣ್ಮೆ ತೋರುತ್ತಿದ್ದಾನೆ. ಏನೆಲ್ಲ ಸೌಕರ್ಯಗಳನ್ನು ನೀಡಿದರೂ ಓದಿನಲ್ಲಿ ನಮ್ಮ ಮಕ್ಕಳು ಹಿಂದುಳಿಯುತ್ತಾರೆ ಎಂದು ಹಲವು ಪಾಲಕರು ಗೊಣಗುತ್ತಾರೆ. ಅಂಥವರು ಮಹಾಂತೇಶನನ್ನು ನೋಡಿ ಅಚ್ಚರಿ ಪಡುತ್ತಿದ್ದಾರೆ.
ಸಂಗ್ರಹ ಮಾಹಿತಿ

About admin

Check Also

ಯಡಿಯೂರಪ್ಪಗೆ ತಮ್ಮ ಕುರ್ಚಿ ಬಿಟ್ಟುಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ..!

ಹೌದು ಇದೇನಪ್ಪ ಯಡಿಯೂರಪ್ಪಗೆ ಕುಮಾರಸ್ವಾಮಿ ಕುರ್ಚಿ ಬಿಟ್ಟುಕೊಟ್ಟಿದ್ದಾರೆ ಅಂದ್ರೆ ಎಲ್ಲರು ಶಾಕ್ ಆಗುವ ವಿಚಾರವೇ ಈ ಎಲ್ಲ ನಾಯಕರು ಚುನಾವಣೆ …

Leave a Reply

Your email address will not be published. Required fields are marked *