Breaking News
Home / ಇತ್ತೀಚಿನ ಸುದ್ದಿಗಳು / ನ್ಯಾಯಬೆಲೆ ಅಂಗಡಿಗಳಲ್ಲಿ ಕೇವಲ ಅನ್ನಭಾಗ್ಯ ಮಾತ್ರವಲ್ಲ ಬಸ್ ,ರೈಲು ,ವಿಮಾನ ಭಾಗ್ಯ ದೊರೆಯಲಿದೆ, ಇದೇನಪ್ಪ ಅಂತೀರಾ ಇಲ್ಲಿ ನೋಡಿ..!

ನ್ಯಾಯಬೆಲೆ ಅಂಗಡಿಗಳಲ್ಲಿ ಕೇವಲ ಅನ್ನಭಾಗ್ಯ ಮಾತ್ರವಲ್ಲ ಬಸ್ ,ರೈಲು ,ವಿಮಾನ ಭಾಗ್ಯ ದೊರೆಯಲಿದೆ, ಇದೇನಪ್ಪ ಅಂತೀರಾ ಇಲ್ಲಿ ನೋಡಿ..!

ನ್ಯಾಯಬೆಲೆ ಅಂಗಡಿಗಳು ಇನ್ನು ಮುಂದೆ ಸೇವಾ ಸಿಂಧು ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಹೇಳಿದ್ದಾರೆ.

ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಜೊತೆಗೆ ಬಸ್‌, ರೈಲು, ವಿಮಾನ ಟಿಕೆಟ್‌ ಸೇರಿದಂತೆ ಅಗತ್ಯ ಸೇವೆಗಳನ್ನು ಒದಗಿಸುವ ವ್ಯವಸ್ಥೆ ಕಲ್ಪಿಸಲಾಗುವುದು.

ಕೇಂದ್ರ ಸರ್ಕಾರ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ ಎಸ್ಪಿವಿ) ಏಜೆನ್ಸಿ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಉಚಿತವಾಗಿ ಬ್ರಾಡ್‌ಬ್ಯಾಂಡ್‌ ಸಂಪರ್ಕ ಕಲ್ಪಿಸಿ ಕೊಡಲಾಗುತ್ತದೆ. ಇದರಿಂದ ನ್ಯಾಯಬೆಲೆ ಅಂಗಡಿಯವರಿಗೆ ಆದಾಯ ಬರುತ್ತದೆ. ರಾಜ್ಯ ಸರ್ಕಾರ ನ್ಯಾಯಬೆಲೆ ಅಂಗಡಿಯವರಿಗೆ ನೀಡುವ ಕಮಿಷನ್‌ನನ್ನು ಮೂರು ವರ್ಷಗಳವರೆಗೆ ಸಿಎಸ್ಸಿ ಎಜೆನ್ಸಿಗೆ ನೀಡಲಾಗುವುದು ಎಂದು ಹೇಳಿದರು.

ಈಗಾಗಲೇ ರಾಜ್ಯದ ಶೇಕಡಾ 80 ರಷ್ಟು ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್‌ ವ್ಯವಸ್ಥೆ ಅಳವಡಿಸಲಾಗಿದೆ. ಇದರಿಂದ ಪಡಿತರ ಸೋರಿಕೆ ಕಡಿಮೆಯಾಗಿದೆ. ಇದರಿಂದ ಪ್ರತಿ ತಿಂಗಳು ಸುಮಾರು 50 ಮೆಟ್ರಿಕ್‌ ಟನ್‌ ಆಹಾರ ಧಾನ್ಯ ಉಳಿತಾಯವಾಗುತ್ತಿದೆ ಎಂದರು. ಅಲ್ಲದೇ ಪಿಒಎಸ್‌ (ಪಾುಂಟ್‌ ಆಫ್ ಸೇಲ್‌) ವ್ಯವಸ್ಥೆ ಅಳವಡಿಸಿರುವುದರಿಂದ ರೇಷನ್‌ ಅಂಗಡಿಯವರು ಪಡಿತರದಾರರನ್ನು ಕರೆದು ರೇಷನ್‌ ನೀಡುವಂತಾಗಿದೆ ಎಂದರು.

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *