Breaking News
Home / ಇತ್ತೀಚಿನ ಸುದ್ದಿಗಳು / ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಅರ್ಜಿ ಆಹ್ವಾನ..!

ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಅರ್ಜಿ ಆಹ್ವಾನ..!

ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 849 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 18, 2017.

ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್ಆರ್‌ಪಿ) 849 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27 ವರ್ಷದ ವಯೋಮಿತಿ ನಿಗದಿ ಪಡಿಸಲಾಗಿದೆ. ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 30 ವರ್ಷಗಳು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು 18/12/2017ಕ್ಕೆ ಹೊಂದಿರತಕ್ಕದ್ದು.

ದಿನಾಂಕ 27/11/2017 ರಿಂದ ಅರ್ಜಿಗಳನ್ನು ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18/12/2017 ಸಂಜೆ 6 ಗಂಟೆ
ಅರ್ಜಿ ಶುಲ್ಕ ಪಾವತಿ: 20/12/2017ರ ತನಕ ಮಾಡಬಹುದು

ಶುಲ್ಕದ ವಿವಾರ :
ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 ಮತ್ತು ಬುಡುಕಟ್ಟು ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

About admin

Check Also

ಮೋದಿಯ ಕನಸಿನ ಯೋಜನೆಯಾದ ಅಂಚೆ ಬ್ಯಾಂಕ್ ಖಾತೆ ತೆಗೆಯೋದು ಹೇಗೆ..!

ಹೌದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತೀಯ ಅಂಚೆ ಪೇಮೆಂಟ್‌ ಬ್ಯಾಂಕ್‌’ಗೆ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಚಾಲನೆ ನೀಡಿದ್ದಾರೆ. …

Leave a Reply

Your email address will not be published. Required fields are marked *