Breaking News
Home / ಇತ್ತೀಚಿನ ಸುದ್ದಿಗಳು / ಕೇಂದ್ರ ಸರ್ಕಾರದಿಂದ ರಾಜ್ಯ ಸರಕಾರಕ್ಕೆ ಮತ್ತೊಂದು ಪ್ರಶಸ್ತಿ..!

ಕೇಂದ್ರ ಸರ್ಕಾರದಿಂದ ರಾಜ್ಯ ಸರಕಾರಕ್ಕೆ ಮತ್ತೊಂದು ಪ್ರಶಸ್ತಿ..!

ಪಂಚಾಯತ್ ರಾಜ್ ವಲಯದಲ್ಲಿನ ಸಾಧನೆಗಾಗಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 2017-18 ನೇ ಸಾಲಿನ ರಾಷ್ಟ್ರೀಯ ಇ-ಪುರಸ್ಕಾರ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ಸತತ ನಾಲ್ಕು ವರ್ಷ ಈ ಪುರಸ್ಕಾರ ಪಡೆದ ಖ್ಯಾತಿಗೆ ಇಲಾಖೆ ಪಾತ್ರವಾಗಿದೆ.

ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನದ ಮೂಲಕ ಪಂಚಾಯಿತಿಗಳ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ಹೊಣೆಗಾರಿಕೆಗಳನ್ನು ಸಾಧಿಸುವಲ್ಲಿ ಮಾಡಿರುವ ಉನ್ನತ ಪ್ರಯತ್ನಗಳನ್ನು ಗುರುತಿಸಿ ವಾರ್ಷಿಕ ಇ-ಪುರಸ್ಕಾರ ನೀಡುವ ಕೇಂದ್ರ ಸರ್ಕಾರದ ಪ್ರಶಸ್ತಿಯನ್ನು ಕರ್ನಾಟಕ ಮೊದಲ ಬಾರಿ ಪಡೆದಿದೆ.

ಈ ಕುರಿತು ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯದ ಜಂಟಿ ಕಾರ್ಯದರ್ಶಿಯವರು, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎನ್ ನಾಗಾಂಬಿಕಾದೇವಿ ಅವರಿಗೆ ಪತ್ರ ಬರೆದು ಈ ವಿಷಯ ತಿಳಿಸಿದ್ದಾರೆ.

ಪಂಚಾಯಿತಿಗಳಿಗೆ ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನದ ಮೂಲಕ ಪಂಚಾಯಿತಿಗಳ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ಹೊಣೆಗಾರಿಕೆಗಳನ್ನು ಸಾಧಿಸುವಲ್ಲಿ ಕರ್ನಾಟಕದ ತಂತ್ರಾಂಶವನ್ನು ಅತ್ಯುನ್ನತ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿ ಕಳೆದ ನಾಲ್ಕುವರೆ ವರ್ಷಗಳಿಂದ ಅನುಷ್ಠಾನಗೊಳಿಸುತ್ತಿರುವ ಗಾಂಧಿ ಸಾಕ್ಷಿ ಕಾಯಕ ತಂತ್ರಾಂಶದ ಮಹತ್ವ ಪೂರ್ಣವಾದ ಕಾರ್ಯತತ್ಪರತೆ ಮತ್ತು ದಕ್ಷತೆಗೆ ಕೇಂದ್ರ ಸರ್ಕಾರ ಮಾನ್ಯತೆ ನೀಡಿದೆ.

ಗಾಂಧಿ ಸಾಕ್ಷಿ ಕಾಯಕ ತಂತ್ರಾಂಶದಲ್ಲಿ ಆರೋಹಣ ಮಾಡದೇ ಈಗ ಯಾವುದೇ ಬಿಲ್ಲುಗಳು ಪಾವತಿಯಾಗದ ವ್ಯವಸ್ಥೆ ಸೃಷ್ಟಿ ಮಾಡಿರುವುದರಿಂದ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅತ್ಯಂತ ಹೆಚ್ಚು ಪಾರದರ್ಶಕ ವ್ಯವಸ್ಥೆಯನ್ನು ಹೊಂದಿರುವುದನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ.

ಸಂಗ್ರಹ:ಈ ನಾಡು

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *