Breaking News
Home / ಇತ್ತೀಚಿನ ಸುದ್ದಿಗಳು / ರಾಜ್ಯ ಸರಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ವಿದ್ಯಾಸಿರಿಯ ಬಗ್ಗೆ ಒಂದಿಷ್ಟು ಮಾಹಿತಿ..!

ರಾಜ್ಯ ಸರಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ವಿದ್ಯಾಸಿರಿಯ ಬಗ್ಗೆ ಒಂದಿಷ್ಟು ಮಾಹಿತಿ..!

ಬಡ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಕಷ್ಟು ಕಾಳಜಿ ಇಟ್ಟುಕೊಂಡಿದ್ದಾರೆ. ಈ ಮಾತು ಅವರ ಕೃತಿಯಲ್ಲಿ ಸಾಬೀತಾಗಿರುವುದೇ ಇದಕ್ಕೆ ಸಾಕ್ಷಿ. ಬಡ ಮತ್ತು ಹಿಂದುಳಿದ ಸಮುದಾಯದ ಮಕ್ಕಳ ಉನ್ನತ ಶಿಕ್ಷಣದ ಬಗ್ಗೆ ಸಾಕಷ್ಟು ಕಾಳಜಿ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2013 ರಲ್ಲಿ “ವಿದ್ಯಾಸಿರಿ” ಯೋಜನೆಯನ್ನು ಜಾರಿಗೆ ತಂದರು.

ಈ ವಿದ್ಯಾಸಿರಿ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರವು ಹಾಸ್ಟೆಲ್ ನಿಂದ ಹೊರಗೆ ಉಳಿಯಲು ಬಯಸುವ ಬಡ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕಾಗಿ 10 ತಿಂಗಳ ವರಗೆ ತಿಂಗಳಿಗೆ ರೂ. 1500 ರೂಪಾಯಿಗಳಂತೆ ಧನಸಹಾಯವನ್ನು ನೀಡುತ್ತಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಂದ ಹಿಡಿದು ಡಾಕ್ಟರೆಟ್ ವರೆಗಿನ ವಿದ್ಯಾರ್ಥಿಗಳಿಗೆ ಈ ಯೋಜನೆಯ ಪ್ರಯೋಜನವು ದೊರಕುತ್ತಿದೆ.


2013 ರಲ್ಲಿ ಈ ಯೋಜನೆಯನ್ನು ಘೋಷಿಸುವಾಗ ಸಚಿವರಾದ ಹೆಚ್. ಆಂಜನೇಯ ಅವರು “ ಬಡ ಮಕ್ಕಳು ಶಿಕ್ಷಣ ಪಡೆದು ಸ್ವಾವಲಂಬೀ ಬದುಕನ್ನು ನಡೆಸಬೇಕು ಎಂಬ ಕಾರಣಕ್ಕಾಗಿ ಈ ಯೋಜನೆಯನ್ನು ರೂಪಿಸಲಾಗುತ್ತಿದೆ “ ಎಂದು ಹೇಳಿದ್ದರು. ಅಂತೆಯೇ ಈ ಮಹತ್ತರ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ಈ ಯೋಜನೆ ಯಶಸ್ವಿಯಾಗಿ ಮುಂದುವರೆದಿದೆ.

ಈ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳು www.backwardclasses.kar.nic.in ಗೆ ಹೋಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿದರೆ, ಹಣವು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೇ ನೇರವಾಗಿ ಹೋಗುತ್ತದೆ.

ಸರ್ಕಾರದಿಂದ ಈವರೆಗೂ 376 ಕೋಟಿ ರೂಪಾಯಿಗಳನ್ನು ಈ ಯೋಜನೆಗಾಗಿ ವ್ಯಯಿಸಲಾಗಿದ್ದು ರಾಜ್ಯಾಂದ್ಯಂತ ಒಟ್ಟು 3.65 ಲಕ್ಷ ಮಕ್ಕಳು ಈ ಯೋಜನೆಯ ಅನುಕೂಲವನ್ನು ಪಡೆದುಕೊಂಡಿದ್ದಾರೆ. ಶಿಕ್ಷಣದ ಉದ್ದೇಶವನ್ನು ಸಾಕಾರಗೊಳಿಸುವ ಸಲುವಾಗಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಹಲವಾರು ಹಾಸ್ಟೆಲ್ ಗಳನ್ನು ತೆರೆಯಲಾಗಿದ್ದು 93,482 ಮಕ್ಕಳು ಇದರ ಪ್ರಯೋಜವನ್ನು ಪಡೆದುಕೊಂಡಿದ್ದಾರೆ.

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *