Breaking News
Home / ಇತ್ತೀಚಿನ ಸುದ್ದಿಗಳು / ಬಿಜೆಪಿ ನಾಯಕರಿಂದ `ಸ್ಲಂ’ರಾಜಕೀಯಕ್ಕೆ ಪಕೋಡ ಪ್ರತಿಭಟನೆಯ ಸ್ವಾಗತ..!

ಬಿಜೆಪಿ ನಾಯಕರಿಂದ `ಸ್ಲಂ’ರಾಜಕೀಯಕ್ಕೆ ಪಕೋಡ ಪ್ರತಿಭಟನೆಯ ಸ್ವಾಗತ..!

ಒಂದೆಡೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸದಲ್ಲಿದ್ರೆ, ಇತ್ತ ಬಿಜೆಪಿ ನಾಯಕರು ಸ್ಲಂಗಳತ್ತ ತಮ್ಮ ರಾಜಕೀಯ ಶುರುಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರ ಲಕ್ಷ್ಮಣಪುರಿ ಸ್ಲಂನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸ್ಲಂಗಳನ್ನ ಅಭಿವೃದ್ಧಿ ಮಾಡಿಲ್ಲ. ನಾವು ಕೊಳಗೇರಿಗಳ ಬಗ್ಗೆ ಅಧ್ಯಯನ ಮಾಡಿ ಪುಸ್ತಕ ಬಿಡುಗಡೆ ಮಾಡ್ತಾ ಇದ್ದು, ಸ್ಲಂಗಳ ಅಭಿವೃದ್ಧಿ ಸಂಪೂರ್ಣ ವಿವರ ಅದರಲ್ಲಿದೆ. ರಾಜ್ಯಾದ್ಯಂತ ಸ್ಲಂ ವಾಸ್ತಾವ್ಯ ಮಾಡ್ತೆನೆ. ನಮ್ಮ ಸರ್ಕಾರ ಬಂದರೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವುದಾಗಿ ಹೇಳಿದ್ರು.


ಇದೇ ಸಂದರ್ಭದಲ್ಲಿ ಅದೇ ಸ್ಲಂ ನ ಕೆಲ ಕಾಂಗ್ರೆಸ್ ಯುವಕರು ಮತ್ತು ನಿರುದ್ಯೋಗಿ ಯುವಕರು ಪಕೋಡ ಮಾರಾಟ ಮಾಡಿ ಪ್ರತಿಭಟನೆ ಮಾಡಿದ್ರು. ನಾವೆಲ್ಲ ಇದೇ ಸ್ಲಂನ ವಾಸಿಗಳು. ಮೋದಿ ಅವರು ನಿರುದ್ಯೋಗ ಸಮಸ್ಯೆ ಬಗ್ಗೆ ಕೇಳಿದ್ರೆ ಪಕೋಡ ಮಾರಾಟ ಮಾಡಿ ಜೀವನ ಮಾಡಿ ಅಂತಾರೆ. ನಾವೆಲ್ಲ ಕಷ್ಟ ಪಟ್ಟು ಓದಿ ವಿದ್ಯಾವಂತರಾಗಿದ್ದು, ಪಕೋಡ ಮಾರಾಟ ಮಾಡೋಕಾ ಅಂತಾ ಯುವಕರು ಆಕ್ರೋಶ ವ್ಯಕ್ತಪಡಿಸಿ, ಮೋದಿ ಮತ್ತು ಯಡಿಯೂರಪ್ಪನ ವಿರುದ್ಧ ಧಿಕ್ಕಾರ ಕೂಗಿದ್ರು.

About admin

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *