Breaking News
Home / ಇತ್ತೀಚಿನ ಸುದ್ದಿಗಳು / ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕನ್ನಡಿಗನಿಗೆ ಒಲಿದ ಮೊದಲ ಪದಕ..!

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕನ್ನಡಿಗನಿಗೆ ಒಲಿದ ಮೊದಲ ಪದಕ..!

ಹೌದು ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಆರಂಭವಾದ 21 ನೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಕನ್ನಡಿಗ ಪಿ. ಗುರುರಾಜ್ ಅವರು 56 ಕೆ.ಜಿ. ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದಾರೆ.

ಪುರುಷರ 56 ಕೆಜಿ ವಿಭಾಗದಲ್ಲಿ ಒಟ್ಟು 249 ಕೆಜಿ ಭಾರ ಎತ್ತಿದ ಅವರು, ಸ್ಕ್ಯಾಚ್ ವಿಭಾಗದಲ್ಲಿ 111 ಕೆಜಿ, ಕ್ಲೀನ್ ಎಂಡ್ ಜರ್ಕ್ ವಿಭಾಗದಲ್ಲಿ 138 ಕೆಜಿ ಎತ್ತುವುದರ ಮೂಲಕ ಪದಕ ಗೆದ್ದಿದ್ದಾರೆ. ಗುರುರಾಜ್ ಮೊದಲ ಪದಕವನ್ನು ಜಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಭಾರತೀಯ ವಾಯುಪಡೆ ಉದ್ಯೋಗಿಯಾಗಿರುವ ಗುರುರಾಜ್, ಟ್ರಕ್ ಚಾಲಕರ ಪುತ್ರರಾಗಿದ್ದಾರೆ. ಇದೀಗ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಚಂಢೀಗಡ್ ಭಾರತೀಯ ವಾಯುಸೇನೆಗೆ ಆಯ್ಕೆಯಾಗಿ ತರಬೇತಿ ಪಡೆಯುತ್ತಿರುವ ಗುರುರಾಜ್ ಪ್ರತಿದಿನ 4 ಘಂಟೆ ಅಭ್ಯಾಸಕ್ಕೆ ತೆರಳುತ್ತಿದ್ದರು. ಚಿನ್ನ ಗೆದ್ದ ಖುಷಿಯಲ್ಲಿರುವ ಗುರುರಾಜ್ ತನ್ನ ಸಾಧನೆಗೆ ತಂದೆ-ತಾಯಿ, ಕ್ರೀಡೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಶಿಕ್ಷಕರು ಹಾಗೂ ಕೋಚ್ ರಾಜೇಂದ್ರ ಪ್ರಸಾದ್ ಅವರ ಮಾರ್ಗದರ್ಶನವೇ ಕಾರಣ ಎಂದು ಹೇಳಿದ್ದಾರೆ.

ಈ ಪದಕ ವಿಜೇತರಾಗಿರುವುದಕ್ಕೆ ಅವರಿಗೆ ಕ್ರಿಕೆಟಿಗ ಸೆಹ್ವಾಗ್ ಭಾರತ ಪದಕಗಳ ಖಾತೆ ತೆಗೆದಿದೆ. ಗುರುರಾಜ್‌ಗೆ ಅಭಿನಂದನೆಗಳು. ಗುರುರಾಜ್‌ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಟ್ವಿಟ್ಟರ್ ನಲ್ಲಿ ಶುಭಾಶಯ ಕೋರಿದ್ದಾರೆ.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *