Breaking News
Home / ಇತ್ತೀಚಿನ ಸುದ್ದಿಗಳು / ಸಿದ್ದರಾಮಯ್ಯ ಎಲ್ಲೇ ನಿಂತರು ಗೆದ್ದೇ ಗೆಲ್ತಾರೆ ಹೀಗಂತ ಹೇಳಿದ್ದು ಯಾರು ಗೊತ್ತಾ..?

ಸಿದ್ದರಾಮಯ್ಯ ಎಲ್ಲೇ ನಿಂತರು ಗೆದ್ದೇ ಗೆಲ್ತಾರೆ ಹೀಗಂತ ಹೇಳಿದ್ದು ಯಾರು ಗೊತ್ತಾ..?

ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಆದ್ರೆ ಈ ಬಾರಿ ಹೆಚ್ಚು ಸುದ್ದಿ ಆಗುತ್ತಿರುವ ಚುನಾವಣಾ ವಿಚಾರ ಅಂದ್ರೆ ಅದು ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಅನ್ನೋದೇ ದೊಡ್ಡ ವಿಚಾರವಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ಸಾಕಷ್ಟು ಬಾರಿ ಹೇಳಿಕೆ ನೀಡಿದ್ದಾರೆ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲೇ ನಿಲ್ಲೋದು ಅಂತ.

ಈ ವಿಚಾವಾರವಾಗಿ ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಬಗ್ಗೆ ತೀರ್ಮಾನಿಸುವುದು ಹೈಕಮಾಂಡ್‌ಗೆ ಬಿಟ್ಟನಿರ್ಧಾರ ಎಂದು ಎಐಸಿಸಿ ಕಾರ್ಯದರ್ಶಿ, ಬೆಳಗಾವಿ ಕಾಂಗ್ರೆಸ್‌ ಉಸ್ತುವಾರಿ ಮಾಣಿಕಂ ಠಾಕೂರ್‌ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲೇ ಅತೀ ಹೆಚ್ಚು ಜನಪ್ರಿಯ ಸಿಎಂ ಎನಿಸಿಕೊಂಡಿದ್ದಾರೆ. ಅವರಿಗೆ ಇರುವ ಜನ ಬೆಂಬಲ ನೋಡಿದರೆ ಅವರು ಯಾವ ಕ್ಷೇತ್ರದಿಂದ ನಿಂತರೂ ಗೆಲ್ಲುವುದರಲ್ಲಿ ಎರಡು ಮಾತಿಲ್ಲ. ಆದರೆ, ಈ ಬಗ್ಗೆ ಹೈಕಮಾಂಡ್‌ ತೀರ್ಮಾನಿಸಲಿದೆ ಎಂದರು.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *