Breaking News
Home / Featured / ಕೇರಳದ ನೆರವಿಗೆ ಧಾವಿಸಿದ ಪ್ರಧಾನಿ..!

ಕೇರಳದ ನೆರವಿಗೆ ಧಾವಿಸಿದ ಪ್ರಧಾನಿ..!

ವರುಣನ ಅಬ್ಬರಕ್ಕೆ ಸಿಲುಕಿ ದೇವರನಾಡು ಕೇರಳ ಸಂಪೂರ್ಣ ಪ್ರವಾಕ್ಕೆ ತುತ್ತಾಗಿದೆ. ಅಲ್ಲಿನ ಜನರ ನೆರವಿಗಾಗಿ ಕೇಂದ್ರ ಸರ್ಕಾರ ಪರಿಹಾರವನ್ನು ಘೋಷಿಸಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನೆಡೆಸುವುದರ ಮೂಲಕ ಕೇರಳ ರಾಜ್ಯಕ್ಕೆ 500 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆ.

ಪ್ರವಾಹದಲ್ಲಿ ಮೃತ ಕುಟುಂಬಸ್ಥರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಪಿ. ಸತಾಶಿವಂ ಹಾಗು ಕೇಂದ್ರ ಪ್ರವಾಸ ಮಂತ್ರಿ ಕೆ.ಜೆ.ಆಲ್ಫೋನ್ಸ್ ರವರಿಂದ ಪ್ರವಾಹದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಅತಿವೃಷ್ಟಿಯಿಂದಾಗಿ ಅಂದಾಜು 19,512 ಕೋಟಿ ರೂ.ನಷ್ಟವಾಗಿದ್ದು, ಪ್ರಧಾನ ಮಂತ್ರಿಗಳು ಕೂಡಲೇ 2 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿಕೊಳ್ಳಲಾಗಿತ್ತು. ಪ್ರಧಾನಿಗಳು ರಾಜ್ಯಕ್ಕೆ 500 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಇದಕ್ಕೂ ಮುನ್ನ ಕೇಂದ್ರ ಸರ್ಕಾರ ರಾಜ್ಯಕ್ಕೆ 100 ಕೋಟಿ ರೂ. ನೀಡಿತ್ತು. ರಾಜ್ಯದ ನೆರವಿಗೆ ಧಾವಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *