Breaking News
Home / Featured / ರಾಜ್ಯ ಸರಕಾರದಿಂದ ಗುಡ್ ನ್ಯೂಸ್..

ರಾಜ್ಯ ಸರಕಾರದಿಂದ ಗುಡ್ ನ್ಯೂಸ್..

ಹೌದು ರಾಜ್ಯ ಸರಕಾರ ಬಡ ವ್ಯಾಪಾರಿಗಳಿಗೆ ಬಡ್ಡಿ ರಹಿತವಾಗಿ ಒಂದು ದಿನದ ಮಟ್ಟಿಗೆ ಸಾಲವನ್ನು ನೀಡುವಂತಹ ಯೋಜನೆಯನ್ನು ತರಲು ಮುಂದಾಗಿದೆ ಎಂದು ಸಚಿವ ಬಂಡೆಪ್ಪ ಕಾಶೆಂಪುರ್ ಇದರ ಬಗ್ಗೆ ಇವತ್ತು ಬೆಂಗಳೂರಿನ ಯಶವಂತಪುರದ ಎಪಿಎಂಸಿ ಯಾರ್ಡ್ ನಲ್ಲಿ ಹೇಳಿದರು.


ಸರ್ಕಾರವು ಒಂದು ದಿನ ಬಡ್ಡಿ ರಹಿತ ಸಾಲವನ್ನು ನೀಡಲು ಯೋಜನೆ ರೂಪಿಸುತ್ತಿದೆ, ಶೀಘ್ರವೇ ಯೋಜನೆಯನ್ನು ಆರಂಭಿಸಲಾಗುತ್ತಿದ್ದು, ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಮೊಬೈಲ್ ಅಪ್ಲಿಕೇಷನ್ ಆಧಾರಿತ ಧನ ಸಹಾಯ ಮಾಡಲು ಮುಂದಾಗಿದೆ.

ಬೀದಿಬದಿ ವ್ಯಾಪಾರಿಗಳು ತಮ್ಮ ದಿನದ ಜೀವನಕ್ಕಾಗಿ ವ್ಯಾಪಾರ ನಡೆಸುತ್ತಿದ್ದಾರೆ ಆದರೆ ಅವರಿಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿದೆ ಆದ್ದರಿಂದ ಅವರಿಗೆ ವ್ಯಾಪಾರ ಮಾಡುವುದೇ ಕಷ್ಟವಾಗಿದೆ ಆದ್ದರಿಂದ ಈ ಯೋಜನೆಯನ್ನು ತರಲು ಮುಂದಾಗಿದೆ.

ಈ ಯೋಜನೆಯೇ ಬಡವರ ಬಂಧು ಎನ್ನುವ ನೂತನ ಯೋಜನೆ ಇದನ್ನು ಜಾರಿಗೆ ತರುತ್ತಿದ್ದು ಅದರಿಂದ ಮೀಟರ್ ಬಡ್ಡಿಯನ್ನು ಸುಲಭವಾಗಿ ನಿಲ್ಲಿಸಬಹುದಾಗಿದೆ ಜೊತೆಗೆ ಸರ್ಕಾರವು ಒಂದು ದಿನದ ಬಡ್ಡಿ ರಹಿತ ಸಾಲವನ್ನೂ ಕೂಡ ನೀಡುತ್ತಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಮತ್ತು ಈ ಸಮಸ್ಯೆಗಳಿಗೆ ಬ್ರೇಕ್ ಹಾಕಲು ಮೊಬೈಲ್ ಆಧಾರಿತ ಧನ ಸಹಾಯ ಮಾಡಲು ಸರ್ಕಾರ ಮುಂದಾಗಿದೆ ಎಂದು ಸಚಿವ ಬಂಡೆಪ್ಪ ಕಾಂಶೆಂಪೂರ್ ಅವರು ಮಾರುಕಟ್ಡೆಗೆ ಭೇಟಿ ನೀಡಿ ಬೀದಿಬದಿ ವ್ಯಾಪಾರಿಗಳ ಜತೆ ಮಾತುಕತೆ ನಡೆಸಿ ಈ ಯೋಜನೆಗೆ ಬಗ್ಗೆ ತಿಳಿಸಿದರು.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *