Breaking News
Home / Featured / ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ..!

ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ..!

ಉತ್ತರ ಕರ್ನಾಟಕದ ಬೆಳಗಾವಿ ಯಿಂದ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನಾ ಕಚೇರಿ (ಕೆಶಿಪ್)ಯನ್ನು ಹಾಸನಕ್ಕೆ ಸ್ಥಳಾಂತರ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಸಮ್ಮಿಶ್ರ ಸರ್ಕಾರವು, ಕೃಷ್ಣ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ ಸೇರಿದಂತೆ ಹಲವು ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸುವ ಮೂಲಕ ಉತ್ತರ ಕರ್ನಾಟಕದ ಜನರನ್ನು ಸಮಾಧಾನಪಡಿಸಲು ಮುಂದಾಗಿದೆ.

ಗುರುವಾರ ನಡೆದ ಸಂಪುಟ ಸಭೆ ಯಲ್ಲಿ ಕೃಷ್ಣ ಭಾಗ್ಯ ಜಲ ನಿಗಮ, ನೀರಾವರಿ ನಿಗಮ ಸೇರಿ ಹಲವು ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸಲು ತಾತ್ವಿಕ ಒಪ್ಪಿಗೆ ನೀಡಲಾಯಿತು.

ಜತೆಗೆ, ಸ್ಥಳಾಂತರಗೊಂಡ ಕಚೇರಿಗಳನ್ನು ಉತ್ತರ ಕರ್ನಾಟಕದ ಯಾವ ಸ್ಥಳದಲ್ಲಿ ಸ್ಥಾಪಿಸಬೇಕು ಹಾಗೂ ಇನ್ನೂ ಹೆಚ್ಚುವರಿ ಕಚೇರಿಗಳ ಸ್ಥಳಾಂತರ ಅಗತ್ಯವಿದೆಯೇ ಎಂಬ ಬಗ್ಗೆ ಶಿಫಾರಸು ಮಾಡಲು ಸಚಿವ ಸಂಪುಟ ಉಪ ಸಮಿತಿ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಉಪ ಸಮಿತಿ ರಚನೆ ಅಧಿಕಾರವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ವಹಿಸಿ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ.

ಉತ್ತರ ಕರ್ನಾಟಕ ಭಾಗದ ಬೆಳಗಾವಿಯಿಂದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುವ ಕೆಶಿಪ್ ಕಚೇರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ. ರೇವಣ್ಣ ಅವರ ಜಿಲ್ಲೆಯಾದ ಹಾಸನಕ್ಕೆ ವರ್ಗಾಯಿಸಲಾಗಿತ್ತು. ಇದರ ಜತೆಗೆ ಬಜೆಟ್‌ನಲ್ಲೂ ಉತ್ತರ ಕರ್ನಾಟಕದ ಭಾಗದ ಜನರನ್ನು ನಿರ್ಲಕ್ಷಿಸಿದ್ದರಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಉತ್ತರ ಕರ್ನಾಟಕದ ಜನತೆ ಹೋರಾಟ ಕೈಗೆತ್ತಿಕೊಂಡಿದ್ದರು. ಅವರನ್ನು ಸಮಾಧಾನಪಡಿಸಲು ಸಭೆ ನಡೆಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಕೆಲವು ಕಚೇರಿಗಳನ್ನು ಉ-ಕ ಭಾಗಕ್ಕೆ ಸ್ಥಳಾಂತರಿಸುವ ಭರವಸೆ ನೀಡಿದ್ದರು.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *