Breaking News
Home / Featured / ಕುರಿ ಸಾಕಣೆದಾರರಿಗೆ ಬಂಪರ್ ಕೊಡುಗೆ ನೀಡಿದ ರಾಜ್ಯ ಸರ್ಕಾರ..!

ಕುರಿ ಸಾಕಣೆದಾರರಿಗೆ ಬಂಪರ್ ಕೊಡುಗೆ ನೀಡಿದ ರಾಜ್ಯ ಸರ್ಕಾರ..!

ಹೌದು ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ನೆರವಾಗಲು ಮತ್ತು ಕುರಿ ಸಾಕಾಣಿಕೆ ಹೆಚ್ಚಾಗಲು ಹೊಸ ಕೊಡುಗೆಯನ್ನು ನೀಡುತ್ತಿದೆ.
ರಾಜ್ಯದ ಪಿಎಲ್‌ಡಿ ಬ್ಯಾಂಕ್‌ಗಳ ಮೂಲಕ ಕುರಿ ಹಾಗೂ ಮೇಕೆ ಸಾಕಣೆದಾರರಿಗೆ 100 ಕೋಟಿ ಸಾಲ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.

ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಸಂಘದ ಆಶ್ರಯದಲ್ಲಿ ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ರೈತರ 47 ಸಾವಿರ ಕೋಟಿ ಬೆಳೆ ಸಾಲ ಮನ್ನಾ ಮಾಡಿದೆ. ಅದೇ ರೀತಿ, ರೈತರ ಉಪಕಸುಬು ಕುರಿ ಸಾಕಣೆ ಲಾಭದಾಯಕವಾಗಬೇಕು. ಉಪ ಕಸುಬಿನ ಉತ್ತೇಜನಕ್ಕಾಗಿ ಕೆಲವು ಯೋಜನೆಗಳನ್ನು ಮಹಾಮಂಡಲ ಹಮ್ಮಿಕೊಂಡಿದೆ. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರೆ ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಹೇಳಿದ್ದಾರೆ.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *