Breaking News
Home / Featured / ಜಾರಕಿಹೊಳಿ ಬ್ರದರ್ಸ್ ಗೆ ವಿದೇಶದಿಂದಲೇ ಸಂದೇಶ ರವಾನಿಸಿದ ಸಿದ್ದರಾಮಯ್ಯ..!

ಜಾರಕಿಹೊಳಿ ಬ್ರದರ್ಸ್ ಗೆ ವಿದೇಶದಿಂದಲೇ ಸಂದೇಶ ರವಾನಿಸಿದ ಸಿದ್ದರಾಮಯ್ಯ..!

ಹೌದು ಸಿದ್ದರಾಮಯ್ಯ ಬೆಂಬಲಿಗರೆಂದೇ ಗುರುತಿಸಿಕೊಂಡಿರುವ ಜಾರಕಿಹೊಳೆ ಬ್ರದರ್ಸ್ ಪಕ್ಷದಲ್ಲಿ ಮಾಡುತ್ತಿರುವ ಬೆಳವಣಿಗೆಯ ಕುರಿತು ಸ್ವತಃ ಸಿದ್ದರಾಮಯ್ಯನವರೇ ಅಸಮಾಧಾನ ಸರಿಪಡಿಸಲು ಮುಂದಾಗಿದ್ದಾರೆ.

ಕರ್ನಾಟಕದಲ್ಲಿ ಕಳೆದ ಎರಡು ಮೂರು ದಿನಗಳಿಂದ ನಡೆಯುತ್ತಿರುವ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದೇಶದಿಂದಲೇ ಜಾರಕಿಹೊಳಿ ಸಹೋದರರಿಗೆ ತಾಳ್ಮೆಯ ಪಾಠ ಮಾಡಿದ್ದಾರೆ.
ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಅವರ ಬಳಿ ಖುದ್ದು ಫೋನಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ನೀವು ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಯುರೋಪ್ ಪ್ರವಾಸದಲ್ಲಿರುವ ಸಮಯದಲ್ಲಿ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಣ ಗೆದ್ದು, ಜಾರಕಿಹೊಳಿ ಬ್ರದರ್ಸ್ ಗೆ ಮುಖಭಂಗವಾದ ನಂತರ ಕರ್ನಾಟಕ ರಾಜಕೀಯದ ಚಿತ್ರಣ ಅಲ್ಲಾಡುತ್ತಿದೆ.

ಜಾರಕಿಹೊಳಿ ಬ್ರದರ್ಸ್ ಗೆ ವಿದೇಶದಿಂದಲೇ ತಾಳ್ಮೆಯ ಪಾಠ ಮಾಡಿರುವ ಸಿದ್ದರಾಮಯ್ಯ, ‘ವಿದೇಶದಿಂದ ಈ ಬಗ್ಗೆ ಮಾತನಾಡುತ್ತೇನೆ. ಅಲ್ಲಿಯವರೆಗೂ ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರವಾಗುವ ಯಾವುದೇ ನಡೆ ಇಡಬೇಡಿ’ ಎಂದು ಸಲಹೆ ನೀಡಿದ್ದಾರೆ.

ಸೆ.16 ರಂದು ವಿದೇಶದಿಂದ ಸಿದ್ದರಾಮಯ್ಯ ವಾಪಸ್ ಆಗಲಿದ್ದು,ರಾಜ್ಯ ರಾಜಕಾರಣದಲ್ಲಿ ಏನಾಗುತ್ತದೆ ಕಾದು ನೋಡಬೇಕಾಗಿದೆ.

About Karnataka Express

Check Also

ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ ಹುಡುಗಿ ಯಾರು ಗೊತ್ತಾ..!

ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ …

Leave a Reply

Your email address will not be published. Required fields are marked *